Download Our App

Follow us

Home » ಕ್ರೀಡೆ » ಡಬ್ಲ್ಯುಪಿಎಲ್ : ಚೊಚ್ಚಲ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಆರ್​ಸಿಬಿ ವನಿತೆಯರು – ಸಿಕ್ಕ ಬಹುಮಾನ ಮೊತ್ತವೆಷ್ಟು?

ಡಬ್ಲ್ಯುಪಿಎಲ್ : ಚೊಚ್ಚಲ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಆರ್​ಸಿಬಿ ವನಿತೆಯರು – ಸಿಕ್ಕ ಬಹುಮಾನ ಮೊತ್ತವೆಷ್ಟು?

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ ಪಂದ್ಯಾವಳಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಭರ್ಜರಿ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಕಪ್‌ ಎತ್ತಿಹಿಡಿದಿದೆ.

14 ರನ್‌ಗಳ ಸುಲಭ ಗುರಿ ಬೆನ್ನತ್ತಿದ RCB ಕೇವಲ 2 ವಿಕೆಟ್‌ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಅಭಿಮಾನಿಗಳ ಬಹುವರ್ಷದ ಕನಸನ್ನು ಆರ್‌ಸಿಬಿ ಮಹಿಳೆಯರು ನನಸು ಮಾಡಿದ್ದಾರೆ.

16 ಆವೃತ್ತಿ ಕಳೆದರೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಒಮ್ಮೆಯೂ ಟ್ರೋಫಿ ಎತ್ತಿಹಿಡಿಯದ ಆರ್‌ಸಿಬಿ ಪುರುಷರ ತಂಡಕ್ಕೆ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ ಮಾದರಿಯಾಗಿದೆ. ಮಹಿಳಾ ಪ್ರೀಮಿಯರ್‌ ಲೀಗ್‌ನ 2ನೇ ಆವೃತ್ತಿಯಲ್ಲೇ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದ್ದು, ಹೆಣ್ಮಕ್ಕಳೇ ಸ್ಟ್ರಾಂಗು ಗುರು ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಪ್ರೀಮಿಯರ್‌ ಲೀಗ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 18.3 ಓವರ್‌ಗಲ್ಲಿ 113 ರನ್‌ ಗಳಿಗೆ ಆಲೌಟ್‌ ಆಯಿತು. 114 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 19.3 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 115 ರನ್‌ ಗಳಿಸಿ ಗೆಲುವು ಸಾಧಿಸಿತು.

ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೈಚಳಕ : ಆರ್‌ಸಿಬಿ ಪರ ಬೌಲಿಂಗ್‌ ಕೈಚಳಕ ತೋರಿದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.3 ಓವರ್‌ಗಳಲ್ಲಿ ಕೇವಲ 12 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ಸೋಫಿ ಮೊಲಿನೆಕ್ಸ್ 3 ವಿಕೆಟ್‌ ಹಾಗೂ ಆಶಾ ಸೋಭನಾ 2 ವಿಕೆಟ್‌ ಪಡೆದು ಮಿಂಚಿದರು.

ಸಿಕ್ಕ ಬಹುಮಾನ ಮೊತ್ತವೆಷ್ಟು? ಕಳೆದ ಬಾರಿಯಂತೆ ಈ ಬಾರಿಯೂ ಚಾಂಪಿಯನ್ ತಂಡಕ್ಕೆ 6 ಕೋಟಿ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗಿದೆ. ಅಂದರೆ ಚಾಂಪಿಯನ್ ಆರ್​ಸಿಬಿ ಟ್ರೋಫಿಯೊಂದಿಗೆ 6 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡು ಲೀಗ್​ಗೆ ವಿದಾಯ ಹೇಳಿದೆ. ಫೈನಲ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಮುಗ್ಗರಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟದಿಂದ ವಂಚಿತವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಬಾರಿಯಂತೆ ಈ ಬಾರಿಯೂ ರನ್ನರ್​ಅಪ್​ಗೆ ತೃಪ್ತಿಪಟ್ಟಿದ್ದು, 3 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

ಇದನ್ನೂ ಓದಿ : ಎಗ್ ಕರಿ ಮಾಡಲು ನಿರಾಕರಿಸಿದ್ದ ಲಿವಿಂಗ್ ಪಾರ್ಟ್​ನರ್​ನ ಹತ್ಯೆ : ಆರೋಪಿ ಅರೆಸ್ಟ್..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here