Download Our App

Follow us

Home » ರಾಜಕೀಯ » ಕೋಮಲ್ ನಟನೆಯ ‘ಯಲಾಕುನ್ನಿ’ ಸಿನಿಮಾದ ಚಿತ್ರೀಕರಣ ಮುಕ್ತಾಯ..!

ಕೋಮಲ್ ನಟನೆಯ ‘ಯಲಾಕುನ್ನಿ’ ಸಿನಿಮಾದ ಚಿತ್ರೀಕರಣ ಮುಕ್ತಾಯ..!

ಖಳನಟ ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ‘ಯಲಾಕುನ್ನಿ’ ಅನ್ನೇ ಸಿನಿಮಾದ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್​​ವುಡ್​​ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿದ್ದ ಚಿತ್ರತಂಡ ಇದೀಗ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

ಈ ಚಿತ್ರವನ್ನು  ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿರವರು ನಿರ್ಮಿಸಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ಯ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಳಿಸಿರುವ “ಯಲಾಕುನ್ನಿ” ಚಿತ್ರಕ್ಕೆ ಚಿತ್ರೀಕರಣ ನಂತರದ ಚಟುವಟಿಕೆಗಳು(ಪೋಸ್ಟ್ ಪ್ರೊಡಕ್ಷನ್) ಬಿರುಸಿನಿಂದ ಸಾಗಿದೆ‌.

ಸದ್ಯದಲ್ಲೇ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡಲು ಚಿತ್ರಮಂದಿರಗಳಿಗೆ “ಯಲಾಕುನ್ನಿ” ಚಿತ್ರ ಬರಲಿದೆ‌. ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌. ಕೋಮಲ್ ಅವರ ಜೊತೆಗೆ ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್, ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

ವಿಶೇಷ ವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

ಇದನ್ನೂ ಓದಿ : ಕೆಲಸ ಕೊಡಿಸೋದಾಗಿ ಕಿರುಕುಳ – ರೈಲ್ವೆ ಫೇಕ್ ಅಧಿಕಾರಿಯ ಪಲ್ಲಂಗ ಪುರಾಣ ಬಯಲು..!

Leave a Comment

DG Ad

RELATED LATEST NEWS

Top Headlines

ಶಾಲಾ ಮಕ್ಕಳ ಕ್ಷೀರ ಭಾಗ್ಯಕ್ಕೆ ಕನ್ನ ಹಾಕಿದ ಹೆಡ್​​ ಮಾಸ್ಟರ್ – ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು..!

ಗುಲ್ಬರ್ಗ : ಅಕ್ಷರ ದಾಸೋಹ ಯೋಜನೆಯ ಕ್ಷೀರ ಭಾಗ್ಯಕ್ಕೆ ಹೆಡ್​​ ಮಾಸ್ಟರರೇ ಕನ್ನ ಹಾಕಿರುವ ಘಟನೆಯೊಂದು ನಡೆದಿದೆ. ಗುಲ್ಬರ್ಗದ ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರ ಗ್ರಾಮದ ಸರ್ಕಾರಿ

Live Cricket

Add Your Heading Text Here