ಜ.8ರಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಈ ದಿನ ‘ಟಾಕ್ಸಿಕ್’ ಚಿತ್ರದ ಬಗ್ಗೆ ಏನಾದರೂ ಅಪ್‌ಡೇಟ್ ಸಿಗಬಹುದು ಎಂದು ನಿರೀಕ್ಷಿಸಿದ್ದ ಫ್ಯಾನ್ಸ್ಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾದ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಈ ಬಗ್ಗೆ ಅಪ್‌ಡೇಟ್ ಕೊಟ್ಟಿದೆ.
ರಾಕಿಂಗ್ ಸ್ಟಾರ್ ಬರ್ತ್ಡೇ ಪ್ರಯುಕ್ತ ಜನವರಿ 8ರ ಬೆಳಿಗ್ಗೆ 10.25ಕ್ಕೆ ಸಿನಿಮಾದ ತುಣುಕನ್ನು ರಿಲೀಸ್ ಮಾಡುವ ಆಲೋಚನೆಯಲ್ಲಿ ‘ಟಾಕ್ಸಿಕ್’ ತಂಡ ಇದೆ. ಯಶ್ ಬರ್ತ್‌ಡೇಯಂದು ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಬಗ್ಗೆ ಅಪ್‌ಡೇಟ್ ಸಿಗಲಿದೆ ಎಂದು ಕೆವಿಎನ್ ನಿರ್ಮಾಣ ಸಂಸ್ಥೆ ತಿಳಿಸಿದೆ. ಯಶ್ ಕೂಡ ಇದೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸದ್ಯ ರಿಲೀಸ್ ಆಗಿರೋ ಪೋಸ್ಟರ್‌ನಲ್ಲಿ ಯಶ್ ಅವರು ಹಳೆಯ ಕಾಲದ ಕಾರಿನ ಮೇಲೆ ನಿಂತಿದ್ದಾರೆ. ಅವರ ಬಾಯಲ್ಲಿ ಸಿಗರೇಟ್ ಇದೆ. ತಲೆಗೆ ಹ್ಯಾಟ್ ಧರಿಸಿದ್ದಾರೆ. ಇದು ಅವರ ಗೆಟಪ್ ಎಂದು ಹೇಳಲಾಗುತ್ತಿದೆ. ಈ ಮೊದಲು ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ಅವರು ತಲೆಗೆ ಹ್ಯಾಟ್ ಧರಿಸಿಯೇ ಕಾಣಿಸಿಕೊಂಡಿದ್ದರು. ಇದೇ ಲುಕ್ ಸಿನಿಮಾದಲ್ಲೂ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಫ್ಯಾನ್ಸ್ ಜ.8ರಂದು ಯಶ್ ಲುಕ್ ನೋಡಲು ಕಾಯುತ್ತಿದ್ದಾರೆ.
ಇದನ್ನೂ ಓದಿ : “ಕುಚುಕು” ಟೀಸರ್, ಸಾಂಗ್ ರಿಲೀಸ್ – ಸ್ನೇಹದ ಮಹತ್ವ ಸಾರುವ ಚಿತ್ರ ಫೆ.14ರಂದು ತೆರೆಗೆ..!