Download Our App

Follow us

Home » ರಾಜಕೀಯ » ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಹೇಳಿಕೆ – ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು..!

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಹೇಳಿಕೆ – ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು..!

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಿಸಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಾಕ್ಷಿ ವಿಚಾರಣೆ ಸಲುವಾಗಿ ಎನ್‌ಐಎ ಅಧಿಕಾರಿಗಳು ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿತ್ತು. ಈ ಬೆನ್ನಲ್ಲೇ, ಸ್ಫೋಟದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್ ಅವರು ಗಂಭೀರ ಆರೋಪ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ದೇಶ ವಿರೋಧಿ ಹೇಳಿಕೆ ನೀಡುವುದು ಚಟವಾಗಿದ್ದು, ಅವರ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದು ಕಿಡಿಕಾರಿದ್ದರು. 

ಇದೀಗ, ಶಾಸಕ ಯತ್ನಾಳ್ ಹೇಳಿಕೆ ವಿಚಾರವಾಗಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಶಾಸಕ ಯತ್ನಾಳ್ ವಿರುದ್ಧ ದೂರು ನೀಡಿದ್ದು, “ಸಚಿವ ದಿನೇಶ್ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಲಾಗಿದೆ. ಚುನಾವಣೆ ಹೊತ್ತಲ್ಲಿ‌ ಕೋಮು ಸೌಹಾರ್ದ ಹಾಳು ಮಾಡಲು ಈ ರೀತಿ ಮಾತಾಡ್ತಿದ್ದಾರೆ. ಇದೊಂದು ‌ದೇಶ ವಿರೋಧಿ ಹೇಳಿಕೆ. ಕೂಡಲೇ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ : ಆಭರಣ ಪ್ರಿಯರಿಗೆ ಮತ್ತೆ ನಿರಾಸೆ : 71 ಸಾವಿರ ರೂ. ಗಡಿ ದಾಟಿದ ಚಿನ್ನದ ಬೆಲೆ, ದಾಖಲೆ ಪ್ರಮಾಣದ ಏರಿಕೆ…!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here