Download Our App

Follow us

Home » ರಾಷ್ಟ್ರೀಯ » “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” – ಶ್ರೀನಗರದಿಂದ ಯೋಗ ಸಂದೇಶ ಸಾರಿದ ಪ್ರಧಾನಿ ಮೋದಿ..!

“ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” – ಶ್ರೀನಗರದಿಂದ ಯೋಗ ಸಂದೇಶ ಸಾರಿದ ಪ್ರಧಾನಿ ಮೋದಿ..!

ಶ್ರೀನಗರ : 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಥೀಮ್​​ನಡಿ ಶ್ರೀನಗರ ದಾಲ್ ಸರೋವರದ ದಡದಲ್ಲಿ 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ ಯೋಗದ ಮಹತ್ವ ಮತ್ತು ಅದರ ಆರೋಗ್ಯ ಪ್ರಯೋಜನಗಳನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, “ಯೋಗವು ಸ್ವಯಂ ಮತ್ತು ಸಮಾಜಕ್ಕಾಗಿ ಎಂಬ ಸಂದೇಶವನ್ನು ಸಾರಿದರು. ಯೋಗದ ಮೂಲಕ ನಾವು ಪಡೆಯುವ ಶಕ್ತಿಯನ್ನು ಶ್ರೀನಗರದಲ್ಲಿ ನಾವಿಂದು ಅನುಭವಿಸಬಹುದು. ಯೋಗ ದಿನದಂದು ದೇಶದ ಜನರಿಗೆ ಮತ್ತು ಪ್ರಪಂಚದ ಮೂಲೆ ಮೂಲೆಗಳಲ್ಲಿ ಯೋಗ ಮಾಡುವ ಜನರಿಗೆ ನಾನು ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದರು.

ಅಂತಾರಾಷ್ಟ್ರೀಯ ಯೋಗ ದಿನವು 10 ವರ್ಷಗಳ ಐತಿಹಾಸಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. 2014ರಲ್ಲಿ ನಾನು ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರಸ್ತಾಪಿಸಿದೆ. ಭಾರತದ ಈ ಪ್ರಸ್ತಾಪವನ್ನು 177 ರಾಷ್ಟ್ರಗಳು ಬೆಂಬಲಿಸಿದವು ಮತ್ತು ಇದು ಸ್ವತಃ ಒಂದು ದಾಖಲೆಯಾಗಿದೆ. ಅಂದಿನಿಂದ ಯೋಗ ದಿನ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನು ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ ಮತ್ತು ಕ್ವಾಡ್‌ಕ್ಯಾಪ್ಚರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

ಇದನ್ನೂ ಓದಿ : ದರ್ಶನ್​​​ 40 ಲಕ್ಷ ಡೀಲ್​​​​ಗೆ ದೊಡ್ಡ ಟ್ವಿಸ್ಟ್ ​- ಪ್ರಭಾವಿ MLA ಬುಡಕ್ಕೆ ಬರುತ್ತಾ ಈ ಕೇಸ್​?

 

 

 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here