ಬೆಂಗಳೂರು : ನೀನು ಬಾರದಿದ್ದರೆ ರಾಮ ಮಂದಿರ ಉದ್ಘಾಟನೆ ನಿಲ್ಲಲ್ಲ ಮಗನೇ ಎಂದು ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿಯೆ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಗನೇ ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ಹಾಗಾಗಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹಾದೇವಪ್ಪ, ಹೆಚ್.ಕೆ.ಪಾಟೀಲ್ ನೇರ ಕಿಡಿಕಾರಿದ್ದಾರೆ.
ಸಂಸದ ಅನಂತ್ಕುಮಾರ್ ಹೆಗಡೆ ಮನುಷ್ಯನೇ ಅಲ್ಲ, ಇಂಥವರ ಬಾಯಲ್ಲಿ ಸಂಸ್ಕೃತಿ ಬಯಸೋಕಾಗುತ್ತಾ..? ಇದು ಮೇಲ್ವರ್ಗದ ಕೆಟ್ಟ ನಡವಳಿಕೆ, ಅಹಂಕಾರದ ಪ್ರತೀಕ. ಕೆಳವರ್ಗಗಳ ನಂಬಿಕೆಯ ದನಿ ಸಿದ್ದರಾಮಯ್ಯ ಪರ ಎಲ್ಲರೂ ನಿಲ್ಲಬೇಕು ಎಂದು ಕಾಂಗ್ರೆಸ್, ಬಿಜೆಪಿ ಸಂಸದ ಅನಂತ್ ಕುಮಾರ್ ವಿರುದ್ಧ ಸಿಡಿದೆದ್ದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ರೆಸ್ಟ್ನಿಂದ ಬಂದ್ಮೇಲೆ ಅನಂತ್ಕುಮಾರ್ ಹೆಗಡೆಗೆ ಏನೋ ಆಗಿದೆ, ಮನಸ್ಸಿಗೆ ಬಂದಂತೆ ಏನೇನೋ ಮಾತ್ನಾಡ್ತಾ ಇದ್ದಾರೆ. ಜನರೇ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ ಎಂದಿದ್ದಾರೆ.
ದಿನೇಶ್ ಗುಂಡೂರಾವ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ. ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.? ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಭಾರತದ ಹೃದಯ ರಾಮಮಂದಿರ, ಭಾರತದ ಆತ್ಮ ರಾಮ. ನಾವು ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಹೋಗುತ್ತಿದ್ದೇವೆ- ರಾಘವೇಶ್ವರ ಶ್ರೀ..!