ಸೋಶಿಯಲ್ ಮೀಡಿಯಾಗಳಲ್ಲಿ ಫೇಮಸ್ ಆಗಲು ಜನ ದೊಡ್ಡ-ದೊಡ್ಡ ಸಾಹಸಗಳಿಗೆ ಕೈ ಹಾಕಿ ಜೀವಕ್ಕೆ ಸಮಸ್ಯೆ ತಂದುಕೊಳ್ಳುತ್ತಾರೆ. ಹಾಗೆಯೇ ಇಲ್ಲೊಬ್ಬ ಯುವಕ 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಹತ್ತಿ ಪುಲ್-ಅಪ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಯುವಕನೊಬ್ಬ 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಪುಲ್-ಅಪ್ ಮಾಡುತ್ತಿರುವುದು ಕಂಡುಬಂದಿದೆ. ರಸ್ತೆಯಿಂದ 10 ಮೀಟರ್ ಎತ್ತರದ ಬೋರ್ಡ್‌ನಲ್ಲಿ ಪುಲ್-ಅಪ್ ಮಾಡಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ.
ಈ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅಮೇಥಿ ಪೊಲೀಸರು ಕೂಡಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸೂಕ್ತ ತನಿಖೆಯ ನಂತರ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಅಮೇಥಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ. ತನಿಖೆಯ ನಂತರ, ನಿಯಮಗಳ ಪ್ರಕಾರ ಸ್ಟಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಮೇಥಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ರೀತಿಯ ವ್ಯಕ್ತಿಗಳನ್ನು ಸುಮ್ಮನೆ ಬಿಡಬೇಡಿ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಆತನನ್ನು ಅರೆಸ್ಟ್ ಮಾಡಿ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ವ್ಯಕ್ತಿಯ ಮಾಹಿತಿಯನ್ನು ಹಂಚಿಕೊಳ್ಳಿ ಎಂದು ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ : ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ರಂಪಾಟ – ಉಗ್ರಂ ಮಂಜು ಜೊತೆ ಚೈತ್ರಾ ಕುಂದಾಪುರ ಕಿರಿಕ್..!