ಇತ್ತೀಚೆಗೆ ತಮಿಳಿನ ‘ಇಂಡಿಯನ್-2’, ‘ವೆಟ್ಟೆಯಾನ್’ ಹಾಗೂ ‘ಕಂಗುವ’ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಸಿನಿಮಾ ಶುರುವಾದ ಬೆನ್ನಲ್ಲೇ ಯೂಟ್ಯೂಬ್, ಫೇಸ್‌ಬುಕ್ ಸೇರಿದಂತೆ ಕೆಲವೆಡೆ ಚಿತ್ರದ ಆಡಿಯನ್ಸ್ ರಿವ್ಯೂ ವೀಡಿಯೋಗಳು ವೈರಲ್ ಆಗಿತ್ತು. ಇದೇ ಚಿತ್ರಗಳ ಸೋಲಿಗೆ ಕಾರಣ ಎಂದು ತಮಿಳು ಸಿನಿಮಾ ನಿರ್ಮಾಪಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಚಿತ್ರಮಂದಿರಗಳಲ್ಲಿ ಯೂಟ್ಯೂಬರ್‌ಗಳ ಪ್ರವೇಶಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದಾರೆ.
ಕೆಲ ವರ್ಷಗಳ ಹಿಂದೆ ಯಾವುದೇ ಸಿನಿಮಾ ಬಿಡುಗಡೆ ಆದರೂ 3 ದಿನಗಳ ಬಳಿಕ ಪತ್ರಿಕೆಗಳಲ್ಲಿ ವಿಮರ್ಶೆ ಬರುತ್ತಿತ್ತು. ಅದನ್ನು ನೋಡಿ ಜನ ಸಿನಿಮಾ ನೋಡಬೇಕೋ? ಬೇಡವೋ? ಎಂದು ನಿರ್ಧರಿಸುತ್ತಿದ್ದರು. ಆದರೆ ಆಧುನಿಕ ಪ್ರಪಂಚದಲ್ಲಿ ಎಲ್ಲವೂ ಬಹಳ ವೇಗವಾಗಿ ನಡೆಯುತ್ತಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ಮಾಡುವಂತಾಗಿದೆ. ಅದಕ್ಕೆ ಯೂಟ್ಯೂಬ್ ರಿವ್ಯೂ ವೀಡಿಯೋಗಳು ಸಾಥ್ ಕೊಡುತ್ತಿವೆ.
ಪ್ರಸ್ತುತ ಯೂಟ್ಯೂಬರ್‌ಗಳ ಸಂಖ್ಯೆ ಹೆಚ್ಚಾಗಿದ್ದು, ಎಲ್ಲರೂ ಯೂಟ್ಯೂಬ್ ಮಾಡಿಕೊಂಡು, ಸಿನಿಮಾ ವಿಮರ್ಶೆ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಕ್ ಹಿಡಿದು ಥಿಯೇಟರ್ನಿಂದ ಹೊರ ಬರುವ ಪ್ರೇಕ್ಷಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುತ್ತಾರೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪ್ರಭಾವ ಬೀರುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಇಂತಹ ವೀಡಿಯೋಗಳು ಸಿನಿಮಾ ಬಗ್ಗೆ ಒಂದು ಒಪಿನಿಯನ್ ಕ್ರಿಯೇಟ್ ಮಾಡುತ್ತಿವೆ. ಅದೇ ಸಿನಿಮಾಗಳ ಸೋಲು, ಗೆಲುವನ್ನು ನಿರ್ಧರಿಸುತ್ತಿದೆ ಎನ್ನುವುದು ತಮಿಳು ಸಿನಿಮಾ ನಿರ್ಮಾಪಕರ ಅಭಿಪ್ರಾಯ ಹೇಳಿದ್ದಾರೆ.
ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ. ಇದರ ಪ್ರಕಾರ ಯಾರೂ ಥಿಯೇಟರ್ ಬಳಿ ಮೈಕ್ ಹಿಡಿದು ಬರುವಂತಿಲ್ಲ. ಈ ರೀತಿಯ ವಿಮರ್ಶೆಗಳು ಸಿನಿಮಾಗೆ ತೊಂದರೆ ಮಾಡುತ್ತವೆ. ಈ ಕಾರಣಕ್ಕೆ ಬ್ಯಾನ್ ಮಾಡಲಾಗಿದೆ ಎನ್ನುವ ಅಭಿಪ್ರಾಯವನ್ನು ನಿರ್ಮಾಪಕರ ಕೌನ್ಸಿಲ್ ನೀಡಿದೆ. ಇದಕ್ಕೆ ಯೂಟ್ಯೂಬರ್‌ಗಳು ವಿರೋಧ ಹೊರಹಾಕಿದ್ದಾರೆ.
ಇದನ್ನೂ ಓದಿ : ನಾನು ರಿಲೇಶನ್‌ಶಿಪ್‌ನಲ್ಲಿ ಇದ್ದೇನೆ – ಮದುವೆ ಬಗ್ಗೆ ವಿಜಯ್ ದೇವರಕೊಂಡ ಓಪನ್ ಟಾಕ್..!