Download Our App

Follow us

Home » ಸಿನಿಮಾ » ರಾಜ್ಯಾದ್ಯಂತ ‘ಯುವ’ ಚಿತ್ರಕ್ಕೆ ಭರ್ಜರಿ ಓಪನಿಂಗ್ – ದೊಡ್ಮನೆ ಕುಡಿ ಯುವ ರಾಜ್​ಕುಮಾರ್ ಅಭಿನಯಕ್ಕೆ ಕನ್ನಡಿಗರು ಫಿದಾ..!

ರಾಜ್ಯಾದ್ಯಂತ ‘ಯುವ’ ಚಿತ್ರಕ್ಕೆ ಭರ್ಜರಿ ಓಪನಿಂಗ್ – ದೊಡ್ಮನೆ ಕುಡಿ ಯುವ ರಾಜ್​ಕುಮಾರ್ ಅಭಿನಯಕ್ಕೆ ಕನ್ನಡಿಗರು ಫಿದಾ..!

ದೊಡ್ಮನೆ ಕುಡಿ ಯುವ ರಾಜ್​ಕುಮಾರ್ ಅಭಿನಯಿಸಿರುವ “ಯುವ” ಸಿನಿಮಾ ಇಂದು ರಾಜ್ಯಾದ್ಯಂತ ಭರ್ಜರಿಯಾಗಿ ರಿಲೀಸ್ ಆಗಿದೆ. ಈ ಚಿತ್ರ ರಾಜ್ಯದ 450ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಬಿಡುಗಡೆಯಾಗಿದ್ದು, ಯುವ ರಾಜ್​ಕುಮಾರ್ ಅಭಿನಯಕ್ಕೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.

ಮುಂಜಾನೆಯಿಂದಲೇ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್​​ನಲ್ಲಿ ಯುವ ಸಂಭ್ರಮ ಜೋರಾಗಿದೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿತ್ರವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಯುವ ರಾಜ್ ಕುಮಾರ್ ಜೊತೆಗೆ ಅಪ್ಪು ಕಟೌಟ್ ಕೂಡ ಚಿತ್ರಮಂದಿರದ ಮುಂದೆ ನಿಲ್ಲಿಸಿದ್ದಾರೆ. ಪಟಾಕಿ ಸಿಡಿಸಿ, ಟಪ್ಪಾಂಗುಚ್ಚಿ ಹೆಜ್ಜೆಹಾಕಿ ದೊಡ್ಮನೆ ಕುಡಿಯನ್ನು ಅಭಿಮಾನಿಗಳು ಬರಮಾಡಿಕೊಂಡಿದ್ದಾರೆ.

ಚಿತ್ರದಲ್ಲಿ ಕಾಂತಾರ ಬೆಡಗಿ ಸಪ್ತಮಿ ಗೌಡ ಅವರು ಯುವ ರಾಜ್​ಕುಮಾರ್​ಗೆ ನಾಯಕಿಯಾಗಿ ಮಿಂಚಿದ್ದಾರೆ. ಕಿಶೋರ್, ಅಚ್ಯುತ್‌ ಕುಮಾರ್ ಹಾಗೂ ಸುಧಾರಾಣಿ ಚಿತ್ರದ ತಾರಾಗಣದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ ಅದ್ಧೂರಿಯಾಗಿ ನಿರ್ಮಾಣ ಮಾಡಿದೆ.

ಜ್ಯೂನಿಯರ್‌ ಅಪ್ಪು ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿರುವ ಯುವ, ಅದ್ಧೂರಿಯಾಗಿ ದರ್ಶನ ಕೊಟ್ಟಿದ್ದಾರೆ. ಇನ್ನು ಸಿನಿಮಾದಲ್ಲಿ ಯುವನ “ಒಬ್ಬನೇ ಶಿವ ಒಬ್ಬನೇ ಯುವ” ಹಾಡಿಗೆ ಸ್ಕ್ರೀನ್ ಮುಂದೆ ದೊಡ್ಮನೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಚಿತ್ರದಲ್ಲಿ ಇಂಜಿನಿಯರಿಂಗ್ ಕಾಲೇಜ್ ಸ್ಟೂಡೆಂಟ್ ಹಾಗೂ ಡೆಲಿವರಿ ಬಾಯ್ ಆಗಿ ಎರಡು ಶೇಡ್‌ಗಳಲ್ಲಿ ಯುವ ರಾಜ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಯುವ ರಾಜ್​​ಕುಮಾರ್ ಅವರ ಆಕ್ಷನ್, ಡೈಲಾಗ್​ಗೆ ಅಭಿಮಾನಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ : ಕಾರಜೋಳಗೆ “ಗೋಬ್ಯಾಕ್” ಕಂಟಕ : ಸಿಟ್ಟಿಂಗ್ ಕ್ಷೇತ್ರ ಕಳೆದುಕೊಳ್ಳುತ್ತಾ ಬಿಜೆಪಿ?

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here