Download Our App

Follow us

Home » ಸಿನಿಮಾ » ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರಕ್ಕೆ ಚಾಲನೆ..!

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರಕ್ಕೆ ಚಾಲನೆ..!

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್​ನಲ್ಲಿರುವ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಗೌರಿಹಬ್ಬದ ಶುಭದಿನದಂದು ನೆರವೇರಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ಅನಿಲ್ ಕುಮಾರ್ ಅವರ ಶ್ರೀಮತಿ ಆರಂಭ ಫಲಕ ತೋರಿದರು. ಝೈದ್ ಖಾನ್ ಅವರ ಅಜ್ಜಿ (ಸಚಿವ ಜಮೀರ್ ಅಹಮದ್ ಖಾನ್ ಅವರ ತಾಯಿ) ಕ್ಯಾಮೆರಾ ಚಾಲನೆ ಮಾಡಿದರು. ಝೈದ್ ಖಾನ್, ರಚಿತಾ ರಾಮ್, ಮಲೈಕಾ‌,‌ ನಿರ್ದೇಶಕ ಅನಿಲ್ ಕುಮಾರ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಗೂ ಆಪ್ತರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮೊದಲು ಬಿಡುಗಡೆಯಾದ ಪೋಸ್ಟರ್​ನಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಝೈದ್ ಖಾನ್ ಅವರೊಂದಿಗೆ ಡಿಂಪಲ್ ಕ್ವೀನ್ ರಚಿತಾರಾಮ್ ಹಾಗೂ “ಉಪಾಧ್ಯಕ್ಷ” ಖ್ಯಾತಿಯ ಮಲೈಕ ಈ ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಅಚ್ಯುತ ಕುಮಾರ್, ALL OK ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ. ಹಾಗಾಗಿ ಯವಜನತೆಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರಕ್ಕೆ “ಕಲ್ಟ್ ” ಎಂದು ಶೀರ್ಷಿಕೆಯಿಟ್ಟಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಲೋಕಿ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಮಾಡಲಿದ್ದಾರೆ. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ , ರವಿವರ್ಮ ಸಾಹಸ ನಿರ್ದೇಶನ ಹಾಗೂ ಭೂಷಣ್ -ಸಂತು ಮಾಸ್ಟರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ : ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here